St. Antony Naravi

 

July 14, 2021 : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು, ನಾರಾವಿಯಲ್ಲಿ ಪ್ರಾಂಶುಪಾಲರಾಗಿ ಹತ್ತು ವರ್ಷಗಳ ಅಮೋಘ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿ, ಗುಣಮಟ್ಟದ ಹಾಗೂ ಮೌಲ್ಯಭರಿತ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿ ಎಲ್ಲಾ ವಿದ್ಯಾರ್ಥಿಗಳ ಪ್ರತ್ಯೇಕವಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕನಸುಗಳನ್ನು ಸಾಕಾರಗೊಳಿಸಿ, ಶಿಕ್ಷಣ ಸಂಸ್ಥೆಯನ್ನು ಸಾಧನೆಯ ಉತ್ತುಂಗಕ್ಕೆ ಏರಿಸಲು ಹಗಲಿರುಳು ಶ್ರಮಿಸಿ, ಕಡಬ ಧರ್ಮಕೇಂದ್ರಕ್ಕೆ ಧರ್ಮಗುರುಗಳಾಗಿ ವರ್ಗಾವಣೆಗೊಂಡ ವಂದನೀಯ ಫಾದರ್ ಅರುಣ್ ವಿಲ್ಸನ್ ಲೋಬೊ ಇವರಿಗೆ ಶಿಕ್ಷಣ ಸಂಸ್ಥೆಗಳ ವತಿಯಿಂದ ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ವಂದನೀಯ ಫಾದರ್ ಸೈಮನ್ ಡಿ’ಸೋಜರವರು ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರನ್ನು ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ರೀಟಾ ಪಿಂಟೊ, ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ತಿತರಿದ್ದರು. ಉಪನ್ಯಾಸಕರಾದ ಶ್ರೀ ಅವಿಲ್ ಮೋರಾಸ್ ಕಾರ್ಯಕ್ರಮ ನಿರೂಪಿಸಿದರು.

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231