July 10, 2017: ಸಂತ ಪಾವ್ಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಕ್ಲಬ್‍ಗಳ ಉದ್ಘಾಟನೆಯನ್ನು ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಉದ್ಘಾಟಿಸಿ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ವಿದ್ಯಾರ್ಥಿ ಸಂಘ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿ, ಸಂಘಗಳು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಬೆಳಕಿಗೆ ತರುವಂತಹ ಸಾಧನಗಳಾಗಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ಲ್ಯಾನ್ಸಿ ಜೋಯೆಲ್ ಸಲ್ಡಾನ್ಹ, ಚರ್ಚ್ ಉಪಾಧ್ಯಕ್ಷರಾದ ಶ್ರೀ ವಿನ್ಸೆಂಟ್ ರೊಡ್ರಿಗಸ್ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಲೋರೆನ್ಸ್ ಮಿನೇಜಸ್ ಹಾಗೂ ಶ್ರೀಮತಿ ವಿಲ್ಮಾ ಮಿರಾಂದ ಮತ್ತು ಬ್ರದರ್ ಜೀವನ್ ಉಪಸ್ಥಿತರಿದ್ದರು.