St. Antony Naravi

 

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ‘ಟ್ಯಾಲೆಂಟ್ಸ್ ಡೇ’ ಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಲುವಿಸ್ ಕುಟಿನ್ಹಾರವರು ವಹಿಸಿ, ವಿದ್ಯಾರ್ಥಿಗಳಿಗೆ ದೊರೆತ ಅವಕಾಶಗಳನ್ನು ಬಳಸಿಕೊಳ್ಳಲು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ, ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ನಾರಾವಿ ಕ್ಷೇತ್ರದಿಂದ ವಿಜೇತರಾದ ಶ್ರೀಮತಿ ರೂಪಲತಾ ಪೂಜಾರಿಯವರನ್ನು ಸನ್ಮಾನಿಸಲಾಯಿತು.

 

ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಅನಿಲ್ ರೋಶನ್, ಕಾರ್ಯದರ್ಶಿ ಶ್ರೀಮತಿ ಮೇಬಲ್ ಫೆರ್ನಾಂಡಿಸ್, ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ ಸ್ವಾಗತಿಸಿ, ಶ್ರೀಮತಿ ಛಾಯಾ ವಂದಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231