St. Antony Naravi

 

Aug. 02, 2017: ಸಂತ ಅಂತೋನಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪೋಷಕರ ಸಭೆಯು ಇತ್ತೀಚೆಗೆ ಸಂತ ಮದರ್ ತೆರೇಜ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಆನೆಗುಡ್ಡೆ ಚರ್ಚ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ನೋರ್ಬರ್ಟ್ ಪಿರೇರಾರವರು ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ಕುಟುಂಬದಲ್ಲಿ ರೂಪುಗೊಳ್ಳುತ್ತದೆ ಎಂದು ನುಡಿದರು.

 

ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಚರ್ಚ್ ಕಾರ್ಯದರ್ಶಿ ಶ್ರೀಮತಿ ರೀಟಾ ಪಿಂಟೊ ಉಪಸ್ಥಿತರಿದ್ದರು. ಕಾಲೇಜು ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ಸಭೆಯಲ್ಲಿ ಭಾಗವಹಿಸಿದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231