St. Antony Naravi

 

ಫೆ.02, 2018: ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ಇತ್ತೀಚೆಗೆ ‘ಧ್ರುವ 2K18’ ಎಂಬ ಕಾರ್ಯಕ್ರಮವು ಜರಗಿತು. ಮುಖ್ಯ ಅತಿಥಿಯಾಗಿ ಉದ್ಯಮಿಗಳಾದ ಶ್ರೀ ವಿನಯ್ ಹೆಗ್ಡೆ ಆಗಮಿಸಿ ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಉಪಯೋಗಿಸಿಕೊಳ್ಳಲು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ ವಹಿಸಿದ್ದರು.

 

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಶಲ್ಮಾ ಗೊನ್ಸಾಲ್ವಿಸ್, ವಿದ್ಯಾರ್ಥಿ ನಾಯಕ ಜೋವೆಲ್ ಫೆರ್ನಾಂಡಿಸ್ ಹಾಗೂ ಅನುಷ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231