St. Antony Naravi

 

July 12, 2018 : ಸಂತ ಅಂತೋನಿ ಕಾಲೇಜು, ನಾರಾವಿ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಭುವನಜ್ಯೋತಿ ರೆಸಿಡೆನ್ಶಿಯಲ್ ಸ್ಕೂಲ್‍ನ, ಪ್ರಾಂಶುಪಾಲರಾದ ಶ್ರೀ ಪ್ರಶಾಂತ್ ಡಿ’ಸೋಜರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೊಸ್ಮಾರು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್ ಹೆಗ್ಡೆ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಪ್ರತಿಜ್ಞಾ ಸ್ವೀಕಾರ ವಿಧಿಯನ್ನು ನಡೆಸಿಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಚರ್ಚ್ ಉಪಾಧ್ಯಕ್ಷರಾದ ಶ್ರೀ ವಿನ್ಸೆಂಟ್ ರೊಡ್ರಿಗಸ್, ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಉಪನ್ಯಾಸಕರಾದ ಶ್ರೀ ರಿಚ್ಚಾರ್ಡ್ ಮೋರಾಸ್, ವಿದ್ಯಾರ್ಥಿ ಸಂಘದ ನಾಯಕರಾದ ಶಶಾಂಕ್ ಹಾಗೂ ಸ್ವಸ್ತಿಕ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪಿಯುಸಿ ಹಾಗೂ ಪದವಿ ಅಂತಿಮ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವು ಜರಗಿತು.

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231