Nov 12, 2018 : ನಾರಾವಿ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.