ಸಂತ ಅಂತೋನಿ ಪದವಿ ಕಾಲೇಜು, ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್‍ಕ್ರಾಸ್ ವತಿಯಿಂದ ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸೈಮನ್ ಡಿ’ಸೋಜರವರು, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಪ್ರಶಾಂತ್ ಪೈ, ವೇಣೂರು ವಲಯ ಅರಣ್ಯಾಧಿಕಾರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಪರಿಸರವನ್ನು ಸಂತಕ್ಷಿಸುವುದರಿಂದ ಭವಿಷ್ಯವನ್ನು ಎದುರಿಸುವ ಸಂಕಲ್ಪವನ್ನು ಮಾಡಬೇಕೆಂದು ತಿಳಿಸಿದರು.

 

ವೇದಿಕೆಯಲ್ಲಿ ಪ್ರಾಂಶುಪಾಲರಾದ ವಂದನೀಯ ಅರುಣ್ ವಿಲ್ಸನ್ ಲೋಬೊ, ನಾರಾವಿ ವಲಯ ಉಪ ಅರಣ್ಯಾಧಿಕಾರಿಯಾದ ಶ್ರೀ ಅಜಿತ್ ಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯೂತ್ ರೆಡ್‍ಕ್ರಾಸ್‍ನ ಅಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳು ಹಾಗೂ ಪ್ರಾಂಶುಪಾಲರು ಕಾಲೇಜಿನ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಪನ್ಯಾಸಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.