ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹರವರು ಇತ್ತೀಚೆಗೆ ಸಂತ ಅಂತೋನಿ ಧರ್ಮಕೇಂದ್ರ ನಾರಾವಿಗೆ 2 ದಿನಗಳ ಪಾಲನಾ ಭೇಟಿಗಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಧರ್ಮಕೇಂದ್ರದ ಧರ್ಮಗುರುಗಳಾದ ವಂದನೀಯ ಫಾದರ್ ಸೈಮನ್ ಡಿ’ಸೋಜ, ಪ್ರಾಂಶುಪಾಲರಾದ ವಂದನೀಯ ಫಾದರ್ ಆಲ್ವಿನ್ ಸೆರಾವೊ, ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ವಿನ್ಸೆಂಟ್ ರೊಡ್ರಿಗಸ್, ಕಾರ್ಯದರ್ಶಿ ಶ್ರೀಮತಿ ರೀಟಾ ಪಿಂಟೊ ಹಾಗೂ ಚರ್ಚ್‍ನ ಭಕ್ತಾಧಿಗಳು ಮುಖ್ಯ ದ್ವಾರದ ಬಳಿ ಸ್ವಾಗತಿಸಿದರು.
ಪ್ರಾರ್ಥನಾ ವಿಧಿಯ ನಂತರ ಸಂತ ಪಾವ್ಲ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, 2 ದಿನಗಳ ಪಾಲನಾ ಭೇಟಿಯ ಸಂದರ್ಭದಲ್ಲಿ ಚರ್ಚ್‍ನ ವಿವಿಧ ಸಂಘಟನೆಗಳು ಹಾಗೂ ಭಕ್ತಾಧಿಗಳೊಡನೆ ಬೆರೆತು ವಿಚಾರ ವಿನಿಮಯ ಮಾಡಿಕೊಂಡರು.