St. Antony Naravi

 

ಕಳೆದ ಆರು ವರ್ಷಗಳಿಂದ ನಾರಾವಿಯ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿ ತಮ್ಮ ಅಭೂತಪೂರ್ವ ಸೇವೆ ನೀಡಿ ಶಿಕ್ಷಣ ಸಂಸ್ಥೆಗಳಲ್ಲಿ ಮೌಲ್ಯಾದಾರಿತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶವನ್ನಿಟ್ಟು ಶ್ರಮಿಸಿದ ಸಂಚಾಲಕರು ಇದೀಗ ವರ್ಗವಣೆಗೊಂಡು ತೆರಳುವ ಸಂದರ್ಭದಲ್ಲಿ ಅವರಿಗೆ ಶಿಕ್ಷಣ ಸಂಸ್ಥೆಗಳ ಪರವಾಗಿ ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಹಾಜರಾಗಿದ್ದರು. ಸಂಚಾಲಕರು ಶಿಕ್ಷಣ ಸಂಸ್ಥೆಗಳಲ್ಲಿ ನೀಡಿದ ಸೇವೆಗಾಗಿ ಅವರನ್ನು ಸಂಸ್ಥೆಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಟ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಂಸುಪಾಲರು, ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಚರ್ಚ್ ಪಾಲನಾ ಪರಿಷದ್‍ನ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ವಂದನೀಯ ಡಾಕ್ಟರ್ ಆಲ್ವಿನ್ ಸೆರಾವೊರವರು ಕಾರ್ಯಕ್ರಮದ ಸಂಯೋಜಕರಾಗಿದ್ದು, ಶ್ರೀ ಅವಿನಾಶ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ಅಧ್ಯಾಪಕರಾದ ಶ್ರೀ ಜೋನ್ಸನ್ ಡಿ’ಕುನ್ಹಾ ಸ್ವಾಗತಿಸಿ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಲಿಡ್ವಿನ್ ಮೋನಿಸ್ ವಂದಿಸಿದರು

 

 

 

 

 

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231